ನಿಷೇಧಿತ ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಮೂವರು ವಶಕ್ಕೆ



(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 25. ಕೇರಳಕ್ಕೆ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ ಘಟನೆ ವರದಿಯಾಗಿದೆ.







ಬಂಧಿತ ಆರೋಪಿಗಳನ್ನು ಅಮೀರ್, ಮುಹಮ್ಮದ್ ಫರ್ವೀಝ್, ಅನ್ಸಿಫ್ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಕಡೆಯಿಂದ ಬಂದ ಕಾರನ್ನು ಖಚಿತ ಮಾಹಿತಿಯ ಮೇರೆಗೆ ಮಂಗಳೂರು ವಿವಿ ದ್ವಾರದ ಬಳಿ ತಡೆದು ನಿಲ್ಲಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ 60 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತು, ಎರಡು ಸ್ಮೋಕ್ ಟ್ಯೂಬ್, 1 ಲೈಟರ್ ಪತ್ತೆಯಾಗಿದೆ. ಇದರ ಬಗ್ಗೆ ಹೆಚ್ಚಿನ ತನಿಖೆ ನಡೆಸಿದಾಗ ಕೇರಳಕ್ಕೆ ಸಾಗಿಸುತ್ತಿರುವ ಬಗ್ಗೆ ಮೂವರು ಬಾಯ್ಬಿಟ್ಟಿದ್ದು, ಅದರಂತೆ ವಸ್ತು ಸಮೇತ ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 

error: Content is protected !!
Scroll to Top