ಉಪ್ಪಿನಂಗಡಿ: ಬೈಕ್ ಗಳ ನಡುವೆ ಅಪಘಾತ ➤ ಓರ್ವ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.27. ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

ಮೃತ ಸವಾರನನ್ನು ಬೆದ್ರೋಡಿ ನಿವಾಸಿ ನವಾಝ್ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

 

Scroll to Top