ಅಪಾರ್ಟ್ ಮೆಂಟ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ…! ➤ ಕಡಬದ ಯುವತಿ ಸೇರಿದಂತೆ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 02. ಬೆಂದೂರ್ ವೆಲ್ ನ ಅಪಾರ್ಟ್ ಮೆಂಟ್ ಒಂದರ ಫ್ಲಾಟ್ ‌ನಲ್ಲಿ ವೇಶ್ಯಾವಾಟಿಕೆ ದಂಧೆಗೆ ಯುವತಿಯರನ್ನು ಹಾಗೂ ಮಹಿಳೆಯರನ್ನು ಒದಗಿಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ.


ಬಂಧಿತರನ್ನು ಕೆ.ಪಿ ಹಮೀದ್ ಪರ್ತಿಪಾಡಿ, ಅನುಪಮ ಶೆಟ್ಟಿ ನಂದನಪುರ ಹಾಗೂ ನಿಶ್ಮಿತ ಸುಬ್ರಹ್ಮಣ್ಯ ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂದೂರ್ ವೆಲ್ 3ನೇ ಕ್ರಾಸ್ ರಸ್ತೆಯಲ್ಲಿರುವ PEEBI ರೆಸಿಡೆನ್ಸಿ ಎಂಬ ಎರಡನೇ ಮಹಡಿಯ ಫ್ಲಾಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಹುಡುಗಿಯರನ್ನು ಕರೆತಂದು ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ ಐದು ಮೊಬೈಲ್ ಫೋನ್ ಗಳು, 50,000 ನಗದು ಹಾಗೂ ಮಾರುತಿ -800 ಕಾರನ್ನು ವಶಪಡಿಸಿದ್ದಾರೆ. ಅಲ್ಲದೇ ನಾಲ್ವರು ಮಹಿಳೆಯರನ್ನು ರಕ್ಷಿಸಲಾಗಿದೆ. ಈ ಕುರಿತು ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಪಕ್ಷದ ಕಾರ್ಯಕರ್ತರೊಂದಿಗೆ ʼದಿ ಸಬರಮತಿ ರಿಪೋರ್ಟ್‌ʼ ಸಿನಿಮಾ ವೀಕ್ಷಿಸಿದ ಸಂಸದ ಕ್ಯಾ. ಚೌಟ

error: Content is protected !!
Scroll to Top