ಕಡಬ: ಮನೆಗೆ ನುಗ್ಗಿದ ಕಳ್ಳರು…!! ➤ 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು



(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 04. ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು 42 ಸಾವಿರ ನಗದು ದೋಚಿರುವ ಘಟನೆ ತಾಲೂಕಿನ ಕೊಯಿಲ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ಗುರುವಾರದಂದು ರಾತ್ರಿ ಸಂಭವಿಸಿದೆ.







ಗಂಡಿಬಾಗಿಲು ಮಸೀದಿ ಬಳಿಯ ನಿವಾಸಿ ಅಬೂಬಕ್ಕರ್ ಎಂಬವರ ಮನೆಯಲ್ಲಿ ಈ ಕೃತ್ಯ ನಡೆದಿದೆ. ಗುರುವಾರದಂದು ರಾತ್ರಿ ಆತೂರು ಮಸೀದಿಯಲ್ಲಿ ದ್ಸಿಕ್ರ್ ಹಲ್ಕಾ ಕಾರ್ಯಕ್ರಮ ಇದ್ದುದರಿಂದ ಮನೆಯವರು ಸಂಜೆ 7 ಗಂಟೆಯ ಹೊತ್ತಿಗೆ ಮನೆಗೆ ಬೀಗ ಹಾಕಿ ತೆರಳಿದ್ದು, ಬಳಿಕ ರಾತ್ರಿ 11 ಗಂಟೆಯ ಹೊತ್ತಿಗೆ ಮರಳಿ ಮನೆಗೆ ಬಂದು ನೋಡಿದಾಗ ಕಪಾಟಿನಲ್ಲಿದ್ದ 14 ಪವನ್ ಚಿನ್ನಾಭರಣ ಮತ್ತು ನಗದು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಗಾನಾ ಟಿ. ಕುಮಾರ್, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top