ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ…!!!

(ನ್ಯೂಸ್ ಕಡಬ) newskadaba.com ಕಲಬುರ್ಗಿ, ಮಾ. 04. ಚಾಕುವಿನಿಂದ ಇರಿದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆಗೈದ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.


ಕೊಲೆಯಾದವನನ್ನು ಪ್ರೀತಂ ಎಂದು ಗುರುತಿಸಲಾಗಿದೆ. ಈತನನ್ನು ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಕೊಲೆಗೈದು ಪರಾರಿಯಾಗಿದ್ದಾರೆ. ಈತ ಅನ್ಯಧರ್ಮದ ಯುವತಿಯನ್ನು ವಿವಾಹವಾಗಿದ್ದು, ಇದುವೇ ಕೊಲೆಗೆ ಕಾರಣವಾಗಿರಬಹುದು ಎಂಬುವುದು ಕೂಡಾ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಈ ಕುರಿತು ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಜ.16ಕ್ಕೆ ಪ್ರಿಯಾಂಕ ಗಾಂಧಿ ಕರ್ನಾಟಕ್ಕೆ ಆಗಮನ

error: Content is protected !!
Scroll to Top