ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ರೂ ಅನುದಾನ ಘೋಷಣೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 05. ರಾಜ್ಯದಾದ್ಯಂತ ಹೆಚ್ಚು ಸಂಚಲನ ಮೂಡಿಸಿದ್ದ ಮೇಕೆದಾಟು ಯೋಜನೆಗೆ ರಾಜ್ಯ ಸರ್ಕಾರವು ಇದೀಗ ಭಾರೀ ಮೊತ್ತದ ಅನುದಾನ ಘೋಷಣೆ ಮಾಡಿದ್ದು, ಮೇಕೆದಾಟು ಯೋಜನೆಗೆ 1,000 ಕೋಟಿ ರೂ, ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ ರೂ., ಕೃಷ್ಣ ಮೇಲ್ದಂಡೆ 3ನೇ ಹಂತಕ್ಕೆ 5 ಸಾವಿರ ಕೋಟಿ ರೂ. ಹಾಗೂ ಕಳಸಾ ಬಂಡೂರಿ ಯೋಜನೆಗೆ ಸಾವಿರ ಕೋಟಿ ರೂ. ನಿಯೋಜನೆ ಮಾಡುವುದಾಗಿ ಸಿಎಂ ಬೊಮ್ಮಾಯಿ ವಿಧಾನಸಭೆಯಲ್ಲಿ 2,65,719.92 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದಾರೆ.

ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇಕಡಾ 7.7ರಷ್ಟು ಹೆಚ್ಚಳವಾಗಿದ್ದು, ‘ಜಲ ಜೀವನ್‌ ಮಿಷನ್’ ಅಡಿ 25 ಲಕ್ಷ ಮನೆಗೆ ನಲ್ಲಿ ನೀರು ನೀಡಲಾಗುತ್ತದೆ. 2022-23ರಲ್ಲಿ 7,000 ಕೋಟಿ ರೂ. ವೆಚ್ಚದಲ್ಲಿ ನಲ್ಲಿ ನೀರು ನೀಡಲಾಗುವುದು. ರಾಜ್ಯಾದ್ಯಂತ 25 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕಕ್ಕೆ ಯೋಜನೆ ಮಾಡಲಾಗಿದೆ.

Also Read  ಮಂಗಳೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಧೀರಜ್ ಮೆದುಳು ನಿಷ್ಕ್ರಿಯ ➤ ಕುಟುಂಬದಿಂದ ಅಂಗಾಂಗ ದಾನಕ್ಕೆ ನಿರ್ಧಾರ..!

 

 

error: Content is protected !!
Scroll to Top