ಮಂಗಳೂರು: ಪುರಭವನ ಬಳಿಯಿರುವ ಮರಕ್ಕೆ ಕಿಡಿಗೇಡಿಗಳಿಂದ ಬೆಂಕಿ..! ➤ ಸ್ಥಳೀಯರಿಂದ ತೀವ್ರ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 07. ನಗರದ ಪುರಭವನದ ಬಳಿಯಲ್ಲಿರುವ ಮರವೊಂದರ ಬುಡಕ್ಕೆ ಯಾರೋ ದುಷ್ಕರ್ಮಿಗಳು ಬೆಂಕಿಯಿಟ್ಟ ಘಟನೆ ನಡೆದಿದೆ.

ಇದೀಗ ಪರಿಸರವಾದಿಗಳು ಮತ್ತು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಇಂತಹ ಸಮಾಜಘಾತುಕ ಕೃತ್ಯವನ್ನು ಎಸಗಿದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು. ನಗರಪಾಲಿಕೆ ಮತ್ತು ಪೊಲೀಸರು ಈ ಬಗ್ಗೆ ಗಮನಹರಿಸಿ ಇಂತಹ ಸಮಾಜಘಾತುಕ ಹಾಗೂ ಕಾನೂನುಬಾಹಿರ ಚಟುವಟಿಕೆಗಳಿಂದ ಧಕ್ಕೆ ಬಾರದಂತೆ ನೋಡಿಕೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Also Read  ಮಂಗಳೂರು: ಟೆಂಪೋ ವಾಹನ ವಿದ್ಯುತ್ ಕಂಬಕ್ಕೆ ಢಿಕ್ಕಿ..! ➤ ಚಾಲಕ ಮೃತ್ಯು

error: Content is protected !!
Scroll to Top