ಕಡಬ: ಮಹಿಳೆಯೋರ್ವರಿಗೆ ಅಶ್ಲೀಲ ಸಂದೇಶ ಕಳುಹಿಸಿ ಬೆದರಿಕೆಯೊಡ್ಡಿದ ಪ್ರಕರಣ ➤ ಆರೋಪಿಗೆ ಶರತ್ತುಬದ್ದ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಕಡಬ, ಮಾ. 07. ಕಡಬ ತಾಲೂಕಿನ ಮಹಿಳೆಯೋರ್ವರ ಮೊಬೈಲ್ ಗೆ ವಾಟ್ಸಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಬೆದರಿಕೆ ಒಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೆ ಒಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ರಂಝೀನ್ ಅವರಿಗೆ ಪುತ್ತೂರು ನ್ಯಾಯಾಲಯವು ಶರತ್ತುಬದ್ಧ ಜಾಮೀನು ಮಂಜೂರುಗೊಳಿಸಿದೆ.


ಕಳೆದ ಡಿಸೆಂಬರ್ ತಿಂಗಳಲ್ಲಿ ನಿರಂತರವಾಗಿ, ಮಹಿಳೆಯೊರ್ವರ ಮೊಬೈಲ್ ನಂಬರ್ ಪಡೆದುಕೊಂಡು, ವಾಟ್ಸಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸುವುದಲ್ಲದೇ ಬೇರೆಯವರ ಶರೀರಕ್ಕೆ ಮಹಿಳೆಯ ಮುಖವನ್ನು ಎಡಿಟ್ ಮಾಡಿ ಇದನ್ನು ಪ್ರಚಾರ ಪಡಿಸುವುದಾಗಿ ಬೆದರಿಕೆಯೊಡ್ಡಿದ ಎಂದು ನೊಂದ ಮಹಿಳೆಯು ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಈ ಕುರಿತು ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ನಡೆಸಿ ಆರೋಪಿ ಬೆಳ್ತಂಗಡಿ ತಾಲೂಕಿನ ರಂಝೀನ್ ಅವರನ್ನು ವಶಕ್ಕೆ ಪಡೆದು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಇದೀಗ ನ್ಯಾಯಾಲಯವು ಆರೋಪಿಗೆ ಷರತ್ತುಬದ್ದ ಜಾಮೀನು ಮಂಜೂರುಗೊಳಿಸಿ ಬಿಡುಗಡೆಗೊಳಿಸಿದೆ.

Also Read  PFI ನಿಷೇಧದ ವೇಳೆ ಬಂಧಿತ 8 ಮಂದಿಯ ಬಿಡುಗಡೆ

error: Content is protected !!
Scroll to Top