ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಕರ್ನಾಟಕ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಸಿದ್ದೀಕ್ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಸರ್ವ ಕಾಲೇಜು ವಿದ್ಯಾರ್ಥಿ ಸಂಘ (ACSA) ಕರ್ನಾಟಕ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಸಿದ್ದೀಕ್ ಹಾಗೂ (ದ.ಕ) ಜಿಲ್ಲಾ ಕಾರ್ಯಾದ್ಯಕ್ಷರಾಗಿ ನೂರ್ ಮಹಮ್ಮದ್ ರವರು ಆಯ್ಕೆಯಾಗಿದ್ದಾರೆ.

ಇದರ ಚುನಾವಣಾ ಪ್ರಕ್ರಿಯೆಯು ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ಬಳಿ ಇರುವ ಲಯನ್ಸ್ ಕ್ಲಬ್ ನಲ್ಲಿ ಉದ್ಗಾಟನೆಗೊಂಡಿತು. ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಿದ್ದೀಕ್ ರವರು ದಕ್ಷಿಣ ಕನ್ನಡ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಜಿಲ್ಲಾ ಕಾರ್ಯಾಧ್ಯಕ್ಷರಾಗಿ, ಕೋವಿಡ್ ಯೋಧರಾಗಿ ಹಾಗೂ ಹಲವಾರು ವಿದ್ಯಾರ್ಥಿಗಳ ಪರವಾಗಿ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣ, ರಾಷ್ಟ್ರದ ಪ್ರಗತಿ, ವಿದ್ಯಾರ್ಥಿಗಳ ಹಕ್ಕು ಮತ್ತು ಬೇಡಿಕೆಗಳ ಬಗ್ಗೆ ಅರಿವು ಮೂಡಿಸಲು ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಸಿದ್ದೀಕ್ ಹೇಳಿದರು. ಜಿಲ್ಲೆಯಲ್ಲಿ ಸದೃಢ ಮತ್ತು ಸಾಮರಸ್ಯದ ವಿದ್ಯಾರ್ಥಿ ಸಮೂಹವನ್ನು ನಿರ್ಮಿಸುವುದಾಗಿ ನೂರ್ ಮೊಹಮ್ಮದ್ ಹೇಳಿದ್ದು, ವಿಶ್ವವಿದ್ಯಾನಿಲಯಕ್ಕೆ ಸಂಬಂಧಿಸಿದಂತೆ ಹಲವಾರು ಸಮಸ್ಯೆಗಳನ್ನು ಬಗೆಹರಿಸಬೇಕಿದೆ. ಇವರಿಬ್ಬರೂ ಯೇನೆಪೊಯ ವಿಶ್ವವಿದ್ಯಾಲಯದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಾಗಿದ್ದಾರೆ.

Also Read  ಮಾಲಿನ್ಯ ರಹಿತ ಗಣೇಶ ಹಬ್ಬ ಆಚರಣೆಗೆ ಸೂಚನೆ

error: Content is protected !!
Scroll to Top