(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 15. ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಉಡುಪಿ ಕಾಲೇಜೊಂದರ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಕರ್ನಾಟಕ ಹೈಕೋರ್ಟ್ ತ್ರಿಸದಸ್ಯ ಪೀಠ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ.
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆಎಂ ಖಾಝಿ ಅವರನ್ನೊಳಗೊಂಡ ಹೈಕೋರ್ಟ್‌ನ ಪೂರ್ಣ ಪೀಠ ಈ ತೀರ್ಪನ್ನು ಪ್ರಕಟಿಸಿದೆ. 11 ದಿನಗಳ ಸುದೀರ್ಘ ವಿಚಾರಣೆ ನಡೆಸಿದ್ದ ಪೂರ್ಣ ಪೀಠವು ಫೆ. 25ರಂದು ತೀರ್ಪು ಕಾಯ್ದಿರಿಸಿತ್ತು. ಸರಿಸುಮಾರು 23.5 ತಾಸು ವಿಚಾರಣೆ ಆಲಿಸಿರುವ ಪೀಠವು 17ದಿನಗಳ ಬಳಿಕ ತೀರ್ಪು ಪ್ರಕಟಿಸಿದ್ದು, ಹಿಜಾಬ್ ಇಸ್ಲಾಂ ನ ಅತ್ಯಗತ್ಯ ಭಾಗವಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.