ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ..!! ➤ ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ರಾಮಕುಂಜ, ಮಾ. 15. ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಬೈಕ್ ಸವಾರರು ಗಾಯಗೊಂಡ ಘಟನೆ ಉಪ್ಪಿನಂಗಡಿ- ಕಡಬ ರಾ.ಹೆ ರಾಮಕುಂಜ ಗ್ರಾಮದ ಗೋಳಿತ್ತಡಿ ಎಂಬಲ್ಲಿ ಸೋಮವಾರದಂದು ರಾತ್ರಿ ಸಂಭವಿಸಿದೆ.


ಪೆರಿಯಡ್ಕ ಸಮೀಪದ ಓಡ್ಲದಲ್ಲಿ ತೋಟದ ಕೆಲಸ ಮಾಡುತ್ತಿದ್ದ ದಾವಣಗೆರೆ ನಿವಾಸಿ ರಾಜು ಎಂಬವರು ತನ್ನ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬಂದ ಬೈಕ್ ನಡುವೆ ಗೋಳಿತ್ತಡಿ ಎಂಬಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ರಾಜು ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನಿ ಸ್ಥಳೀಯರು ಸಹಾಯದಿಂದ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದು ಬೈಕ್ ನಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಅವರನ್ನೂ ಕೂಡಾ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Also Read  'ಕನ್ನಡ ರಾಜ್ಯೋತ್ಸವದಂದು ಶಾಲೆ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಬೇಕು': ಡಿಕೆಶಿ

error: Content is protected !!
Scroll to Top