(ನ್ಯೂಸ್ ಕಡಬ) newskadaba.com ಕಡಬ, ಮಾ. 16. ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ಲಿ.) ಕಡಬ ಇವರಿಂದ ಸೈಂಟ್ ಜೋಕಿಮ್ ಪ್ರೌಢಶಾಲೆಗೆ ಕಂಪ್ಯೂಟರ್‌ನ್ನು ಕೊಡುಗೆಯಾಗಿ ನೀಡುವ ಕಾರ್ಯಕ್ರಮವು ಸೈಂಟ್ ಜೋಕಿಮ್ ಚರ್ಚ್ ಸಮುದಾಯ ಭವನದಲ್ಲಿ ನಡೆಯಿತು
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸೈಂಟ್ ಜೋಕಿಮ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ವಂ/ ರೆ.ಫಾದರ್ ಅರುಣ್ ವಿಲ್ಸನ್ ಲೋಬೊರವರು, ಕಂಪ್ಯೂಟರ್ ಆಧಾರಿತ ಶಿಕ್ಷಣವನ್ನು ನೀಡುವುದರಿಂದ ಮಕ್ಕಳಲ್ಲಿ ಸರ್ವತೋಮುಖ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ನುಡಿದರು. ಮುಖ್ಯ ಅತಿಥಿಗಳಾದ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ ಮಂಗಳೂರು ಅಧ್ಯಕ್ಷರಾದ ಕೆ ಜೈರಾಜ್ ಬಿ ರೈ ಯವರು ವಿದ್ಯಾರ್ಥಿಗಳು ಸಾಧನೆ ಮಾಡಬೇಕಾದರೆ ಆಧುನಿಕ ತಂತ್ರಜ್ಞಾನ ಅತ್ಯವಶ್ಯಕ ಎಂದು ನುಡಿದರು. ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಂಗಳೂರು ಇಲ್ಲಿಯ ನಿರ್ದೇಶಕರಾದ ಶ್ರೀ.ಬಿ.ಪ್ರಸಾದ್ ಕೌಶಲ್ ಶೆಟ್ಟಿ ಮಾತನಾಡಿದರು. ವೇದಿಕೆಯಲ್ಲಿ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಕಡಬ ಶಾಖೆಯ ಮೆನೇಜರ್ ಆಗಿರುವ ದಿನೇಶ್ ಶೆಟ್ಟಿ ಹಾಗೂ ಸೈಂಟ್ ಜೋಕಿಮ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶ್ರೀಲತಾ ಉಪಸ್ಥಿತರಿದ್ದರು. ಪ್ರೌಢಶಾಲೆಯ ಸಹಶಿಕ್ಷಕಿ ಶ್ರೀಮತಿ ಲತಾ ಕಾರ್ಯಕ್ರಮ ನಿರೂಪಿಸಿದರು.