ಸ್ಕೂಲ್ ಬಸ್ ಹಾಗೂ ಕಾರಿನ ನಡುವೆ ಢಿಕ್ಕಿ ➤ ಪ್ರಯಾಣಿಕರು ಪಾರು..!

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. ‌16. ಸ್ಕೂಲ್ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಕುಡ್ತಮುಗೇರು ಸಮೀಪದ ಮಂಕುಡೆಯ ಕಲ್ಕಾಜೆ ಎಂಬಲ್ಲಿ ನಡೆದಿದೆ.

ಕಲ್ಲಡ್ಕ ವಿದ್ಯಾಕೇಂದ್ರದ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಸಂಭವಿಸಿದೆನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬಸ್ಸಿಗೂ ಹಾನಿಯಾಗಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Scroll to Top