ಬೆಳ್ತಂಗಡಿ ಎಸ್ಐ ನಂದಕುಮಾರ್ ಗೆ ಮುಖ್ಯಮಂತ್ರಿ ಚಿನ್ನದ ಪದಕ ➤ ಮಗು ಅಪಹರಣವನ್ನು ಸಿನಿಮೀಯ ಶೈಲಿಯಲ್ಲಿ ಭೇದಿಸಿದ್ದ ಸಬ್ ಇನ್ಸ್‌ಪೆಕ್ಟರ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ.31. ಪೊಲೀಸ್ ಇಲಾಖೆಯಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ್ದಕ್ಕೆ ಹಾಗೂ ಅಪರಾಧ ಪ್ರಕರಣಗಳನ್ನು ಭೇದಿಸಿದ ದಕ್ಷ ಪ್ರಾಮಾಣಿಕ ಪ್ರಸ್ತುತ ಬೆಳ್ತಂಗಡಿ ಪೊಲೀಸ್ ಠಾಣೆಯ ಪಿಎಸ್ಐ ಅಗಿರುವ ನಂದಕುಮಾರ್ ಎಂ.ಎಂ ಅವರು ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದಾರೆ.

ಇತ್ತೀಚಿಗೆ ನಡೆದ ಮಗು ಅಪಹರಣ ಪ್ರಕರಣವನ್ನು ಯಶಸ್ವಿಯಾಗಿ ಬೇಧಿಸಿದ ಕೀರ್ತಿ ನಂದಕುಮಾರ್ ಅವರಿಗೆ ಸಲ್ಲುತ್ತದೆ. ಜೊತೆಗೆ ಉಪ್ಪಿನಂಗಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಹಾಗೂ ಬಂಟ್ವಾಳ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅನೇಕ ಅಪರಾಧ ಪ್ರಕರಣಗಳ ಸಹಿತ ಶಾಂತಿ ಸುವ್ಯವಸ್ಥೆಯಲ್ಲಿ ದಕ್ಷ ಪ್ರಾಮಾಣಿಕ ಸೇವೆ ಮಾಡಿದ್ದ ನಂದ ಕುಮಾರ್ ಅವರನ್ನು ಸರಕಾರ ಗುರುತಿಸಿ ಮುಖ್ಯಮಂತ್ರಿ ಪದಕ ನೀಡಲು ಮುಂದಾಗಿದೆ.

Also Read  ಉಪ್ಪಿನಂಗಡಿ: ಒಣಗಲು ಹಾಕಿದ್ದ ಅಡಿಕೆ ಕಳ್ಳತನ ➤ ಅಡಿಕೆ ಸಹಿತ ಇಬ್ಬರು ಖಾಕಿ ಬಲೆಗೆ..!

 

 

 

error: Content is protected !!
Scroll to Top