ಸುಬ್ರಹ್ಮಣ್ಯ: ಬೈಕ್ – ಕಾರು ನಡುವೆ ಢಿಕ್ಕಿ ➤ ನಿವೃತ್ತ ಎಎಸ್ಐ ಮೃತ್ಯು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಎ.04. ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ನಿವೃತ್ತ ಎಎಸ್ಐ ಓರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದ ಬಳಿ ಭಾನುವಾರದಂದು ಸಂಭವಿಸಿದೆ.

ಮೃತರನ್ನು ಕುಲ್ಕುಂದ‌ ನಿವಾಸಿ ನಿವೃತ್ತ ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಎ.ಪಿ.ಗೌಡ ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕಾರು ನಡುವೆ ಢಿಕ್ಕಿ ಉಂಟಾಗಿ ಈ ದುರ್ಘಟನೆ ಸಂಭವಿಸಿದೆ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ.

Also Read  ನದಿಗೆ ಈಜಲು ಇಳಿದಿದ್ದ ಇಬ್ಬರು ಉಪನ್ಯಾಸಕರು ನೀರಿನಲ್ಲಿ ಮುಳುಗಿ ಮೃತ್ಯು

 

 

error: Content is protected !!
Scroll to Top