ಪೆಟ್ರೊಲ್, ಗ್ಯಾಸ್ ಹೊರೆಯ ಜೊತೆಗೆ ವಿದ್ಯುತ್ ಬರೆ‼️ ➤ ರಾಜ್ಯದಲ್ಲಿ ವಿದ್ಯುತ್ ಬೆಲೆ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.04. ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್‌, ಗ್ಯಾಸ್ ಹೊರೆಯ ಜೊತೆಗೆ ಇದೀಗ‌ ವಿದ್ಯುತ್ ಕೂಡಾ ಬರೆಯಾಗಿದೆ.

ಎಲ್ಲ ವಿದ್ಯುತ್ ಸರಬರಾಜು ಕಂಪೆನಿಗಳಿಗೂ (ಎಸ್ಕಾಂ) ವಿದ್ಯುತ್ ದರ ಪ್ರತಿ ಯೂನಿಟ್ ಗೆ ಸರಾಸರಿ 35 ಪೈಸೆ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಹಂಗಾಮಿ ಅಧ್ಯಕ್ಷ ಮಂಜುನಾಥ್ ಆದೇಶ ಹೊರಡಿಸಿದ್ದಾರೆ. ಬೆಸ್ಕಾಂ, ಚೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಹಾಗೂ ಹೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್​​ಗೆ 35 ಪೈಸೆ ಹೆಚ್ಚಳ ಮಾಡಲಾಗಿದ್ದು ಎಪ್ರಿಲ್​ 1ರಿಂದಲೇ ಪರಿಷ್ಕೃತ ದರ ಅನ್ವಯವಾಗಲಿದೆ. ಎಸ್ಕಾಂಗಳು 1 ರೂ. 85 ಪೈಸೆ ಹೆಚ್ಚಳಕ್ಕೆ ಮನವಿ ಸಲ್ಲಿಸಿದ್ದವು. ಸಾಧಕ ಬಾಧಕ ಪರಿಶೀಲಿಸಿದ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ(KERC) 35 ಪೈಸೆ ಹೆಚ್ಚಿಸಿದೆ.

Also Read  ಅರಂತೋಡು- ಅಂಗಡಿಮಜಲು ರಸ್ತೆ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ

 

 

 

error: Content is protected !!
Scroll to Top