ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಓರ್ವ ಮೃತ್ಯು, ನಾಲ್ವರು ಗಂಭೀರ



(ನ್ಯೂಸ್ ಕಡಬ) newskadaba.com ಮಾಣಿ, ಎ.09. ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯುಂಟಾದ ಪರಿಣಾಮ ಓರ್ವ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮಾಣಿ ಸಮೀಪ ನಡೆದಿದೆ.







ಮೃತ ವ್ಯಕ್ತಿಯನ್ನು ಬೆಂಗಳೂರು ಜೆ.ಸಿ.ನಗರದ ಕುರುಬರಹಳ್ಳಿ ನಿವಾಸಿ ಲಕ್ಷ್ಮಣ ಆಚಾರಿ (65) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರಿನತ್ತ ತೆರಳುತ್ತಿದ್ದ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ನಡುವೆ ಮಾಣಿಯ ಬುಡೋಳಿ ಎಂಬಲ್ಲಿ ತಲುಪಿದಾಗ ಮುಖಾಮುಖಿ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಲಕ್ಷ್ಮಣ ಆಚಾರಿ ಸ್ಥಳದಲ್ಲೇ ಮೃತಪಟ್ಟಿದ್ದು, ಎರಡೂ ಕಾರುಗಳಲ್ಲಿನ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 

 

error: Content is protected !!
Scroll to Top