ಉಡುಪಿ: ಡೆತ್ ನೋಟ್ ಬರೆದಿಟ್ಟು ಕಾಂಟ್ರಾಕ್ಟರ್ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ➤ ಸಚಿವ ಈಶ್ವರಪ್ಪ ತಲೆದಂಡ..?



ಉಡುಪಿ, ಎ.13. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಮತ್ತು ಆಪ್ತರಾದ ಬಸವರಾಜ, ರಮೇಶ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಸಚಿವ ಸ್ಥಾನದಿಂದ ತಲೆದಂಡವಾಗುವ ಸಾಧ್ಯತೆಯಿದೆ.







ಮೃತರ ಸಂಬಂಧಿ ಬೆಳಗಾವಿಯ ಪ್ರಶಾಂತ ಗೌಡ ಪಾಟೀಲ್ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿರುವ ಡೆತ್‌ ನೋಟ್‌ ವೈರಲ್‌ ಆದ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ತಿಳಿಸಿರುವುದಾಗಿ ದೃಶ್ಯ ಮಾಧ್ಯಮಗಳು ವರದಿ ಮಾಡಿವೆ.






 

 

 

error: Content is protected !!
Scroll to Top