ಸುಳ್ಯದ ದಂಪತಿ ಮೈಸೂರಿನಲ್ಲಿ ಆತ್ಮಹತ್ಯೆ



(ನ್ಯೂಸ್ ಕಡಬ) newskadaba.com ಸುಳ್ಯ, ಎ.18. ಸೋಣಂಗೇರಿ, ಮಂಗಳೂರು ಮೊದಲಾದೆಡೆ ಪೋಸ್ಟ್ ಮ್ಯಾನ್ ಆಗಿ ಕಾರ್ಯನಿರ್ವಹಿಸಿದ್ದ ಮೂಲತಃ ಸುಳ್ಯ ನಿವಾಸಿ, ಪ್ರಸ್ತುತ ಮೈಸೂರಿನಲ್ಲಿ ನೆಲೆಸಿದ್ದ ವ್ಯಕ್ತಿ ಪತ್ನಿಯೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರದಂದು ವರದಿಯಾಗಿದೆ.







ಆತ್ಮಹತ್ಯೆ ಮಾಡಿಕೊಂಡ ದಂಪತಿಯನ್ನು ಸುಳ್ಯ ಕುಕ್ಕಾಜೆಕಾನದ ಮಾಧವ ನಾಯ್ಕ್ (56) ಮತ್ತು ಅವರ ಪತ್ನಿ ಉಷಾ (47) ಎಂದು ಗುರುತಿಸಲಾಗಿದೆ. ನಾಲ್ಕು ವರ್ಷಗಳ ಹಿಂದೆ ಪೋಸ್ಟ್ ಮ್ಯಾನ್ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದು ಪತ್ನಿ, ಪುತ್ರಿ ಸಮೇತ ಮೈಸೂರಿಗೆ ಹೋಗಿ ನೆಲೆಸಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.






 

 

error: Content is protected !!
Scroll to Top