ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮುಂದಿನ 5 ದಿನಗಳ ಭಾರೀ ಮಳೆ ➤ ಹವಾಮಾನ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.20. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ಮುಂದುವರಿಯಲಿದೆ. ಇದರ ಜೊತೆಗೆ ಏಪ್ರಿಲ್ 21ರ ವರೆಗೆ ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಆಲಿ ಕಲ್ಲು ಸಹಿತ ಮಳೆಯಾಗಲಿದ್ದು, ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ದಕ್ಷಿಣ ಭಾರತದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Also Read  ಕಡಬ: ರೀಜನಲ್ ಎಸ್‍ಎಂಎ ಸಮಾವೇಶ ►ಪೂರ್ವಭಾವಿ ಸಭೆ

 

 

error: Content is protected !!