ಸುಳ್ಯ: ಚಲಿಸುತ್ತಿದ್ದ ಲಾರಿಯಡಿಗೆ ಹಾರಿ ಗಂಭೀರ ಗಾಯಗೊಂಡಿದ್ದ ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಎ.21. ಲಾರಿಯಡಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿದ್ದ ವ್ಯಕ್ತಿ ಇಂದು ಮೃತಪಟ್ಟಿದ್ದಾರೆ.


ಮೃತ ವ್ಯಕ್ತಿಯನ್ನು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲ್ಲೂಕಿನ ಮಂಜುನಾಥ್ ಎಂದು ಗುರುತಿಸಲಾಗಿದೆ. ಕಳೆದ ಕೆಲವು ಸಮಯದಿಂದ ಸುಳ್ಯದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ್ ತನ್ನ ಪತ್ನಿ ಮತ್ತು ಮಗುವನ್ನು ಊರಿಗೆ ಕಳಿಸಿದ್ದನೆನ್ನಲಾಗಿದೆ. ಮಾನಸಿಕವಾಗಿ ಕುಗ್ಗಿದಂತಿದ್ದ ಈತ ಬುಧವಾರದಂದು ಸುಳ್ಯದ ಗಾಂಧಿನಗರದಲ್ಲಿ ತೆಂಗಿನಕಾಯಿ ಹೇರಿಕೊಂಡು ಹೋಗುತ್ತಿದ್ದ ಲಾರಿಯ ಚಕ್ರದಡಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Also Read  ಗದ್ದಲ, ಮಾತಿನ ಚಕಮಕಿಯಲ್ಲಿ ನಡೆದ ಕುಟ್ರುಪಾಡಿ ಗ್ರಾಮ ಸಭೆ ► ಗ್ರಾ.ಪಂ. ಸದಸ್ಯರು V/S ಪಿ.ಡಿ.ಒ

 

 

error: Content is protected !!
Scroll to Top