ಮಾಣಿ: ನಿಯಂತ್ರಣ ತಪ್ಪಿ ಅಂಗಡಿಗಳಿಗೆ ನುಗ್ಗಿದ ಟೋಯಿಂಗ್ ಲಾರಿ ➤ ಚಾಲಕ ಗಂಭೀರ, ತಪ್ಪಿದ ದುರಂತ

(ನ್ಯೂಸ್ ಕಡಬ) newskadaba.com ವಿಟ್ಲ, ಮೇ.06. ಟೋಯಿಂಗ್ ಲಾರಿಯೊಂದು ಬಸ್ ತಂಗುದಾಣ, ಅಂಗಡಿಗಳಿಗೆ ಡಿಕ್ಕಿ ಹೊಡೆದು ಬಳಿಕ ಹೋಟೆಲ್ ಗೆ ನುಗ್ಗಿದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.

ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಕೊಡಾಜೆ ಜಂಕ್ಷನ್ ನಲ್ಲಿ ನಂದಿನಿ ಹಾಲಿನ ಅಂಗಡಿ, ಬೇಕರಿ, ಬಸ್ ತಂಗುದಾಣ, ಮೊಬೈಲ್ ಅಂಗಡಿಗೆ ಢಿಕ್ಕಿ ಹೊಡೆದು ಆ ಬಳಿಕ ಹೋಟೆಲ್ ಗೆ ನುಗ್ಗಿದೆ. ಘಟನೆಯಲ್ಲಿ ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ವಿಧಾನಪರಿಷತ್ ಚುನಾವಣೆ ➤ ಎಸ್ಡಿಪಿಐ ಅಭ್ಯರ್ಥಿಯಿಂದ ಬೆಳ್ತಂಗಡಿಯಲ್ಲಿ ಸಭೆ

 

 

error: Content is protected !!
Scroll to Top