ಚಾರ್ಮಾಡಿ: ಅಪಘಾತವಾಗಿ ಸಹಾಯದ ನಿರೀಕ್ಷೆಯಲ್ಲಿದ್ದ ಕಾರಿನ ಚಾಲಕನನ್ನು ಬೆದರಿಸಿ ದರೋಡೆ ➤ ಚಿನ್ನ, ಹಣ, ಮೊಬೈಲ್ ಕಸಿದು ಪರಾರಿ

(ನ್ಯೂಸ್ ಕಡಬ) newskadaba.com ಬಣಕಲ್, ಮೇ.06. ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದಿದ್ದ ಕಾರಿನ ಪ್ರಯಾಣಿಕರನ್ನು ಬೆದರಿಸಿ ಹಣ, ಚಿನ್ನಾಭರಣ ಹಾಗೂ ಮೊಬೈಲನ್ನು ಎಗರಿಸಿರುವ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಬುಧವಾರ ತಡರಾತ್ರಿ ನಡೆದಿದ್ದು, ಈ ಬಗ್ಗೆ ಬಣಕಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ನಿವಾಸ ಮಧುಸೂದನ್ ಎಂಬವರು ಬುಧವಾರದಂದು ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ತಡರಾತ್ರಿ ಇವರ ಕಾರು ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಸಂದರ್ಭ ದ್ವಿಚಕ್ರ ವಾಹನದಲ್ಲಿ ಸ್ಥಳಕ್ಕಾಗಮಿಸಿದ ಮೂವರು ಯುವಕರ ತಂಡ ಕಾರನ್ನು ಸುತ್ತುವರಿದು ಹಣ, ಮೊಬೈಲ್ ಹಾಗೂ ಚಿನ್ನದ ಉಂಗುರವನ್ನು ಕಸಿದುಕೊಂಡು ಪರಾರಿಯಾಗಿರುವುದಾಗಿ ದೂರಿ‌ನಲ್ಲಿ ಉಲ್ಲೇಖಿಸಲಾಗಿದೆ.

Also Read  ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಅಪಸ್ವರವೇಕೆ ?    ➤ ಲೇಖನ; ದಿವಾಕರ್‌.ಡಿ.ಮಂಡ್ಯ               

 

 

error: Content is protected !!
Scroll to Top