ಬಾಲಕಿಯೊಂದಿಗೆ ಅಸಭ್ಯ ವರ್ತನೆ ➤ ಆರೋಪಿ ಅಂದರ್..!



(ನ್ಯೂಸ್ ಕಡಬ) newskadaba.com ಪುತ್ತೂರು, ಮೇ. 10. ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದೆನ್ನಲಾದ ಯುವಕನೋರ್ವನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.







ಬಂಧಿತ ಯುವಕನನ್ನು ನೌಫಲ್ ಸರಳಿಕಟ್ಟೆ ಎಂದು ಗುರುತಿಸಲಾಗಿದೆ. ಈತ ಬಸ್ ನಿಲ್ದಾಣದಲ್ಲಿ ಮನೆಗೆಲಸ ಮಾಡುತ್ತಿದ್ದ ಗದಗ ಮೂಲದ ಮಹಿಳೆಯ ಜೊತೆಗಿದ್ದ ಬಾಲಕಿಗೆ ಆಮಿಷವೊಡ್ಡಿ ಬಸ್ ನಿಲ್ದಾಣದ ವಾಶ್ ರೂಂ ಗೆ ಕರೆದೊಯ್ದಿದ್ದಾನೆ ಎನ್ನಲಾಗಿದೆ. ಈ ಕುರಿತು ಮಹಿಳೆಯು ಆರೋಪಿಯನ್ನು ವಿಚಾರಿಸಿದಾಗ ಆರೋಪಿಯು ಮಹಿಳೆಗೆ ಬೆದರಿಕೆ ಒಡ್ಡಿರುವುದಾಗಿ ದೂರಿನಲ್ಲಿ ತಿಳಿಸಿಲಾಗಿದೆ. ಇದೇವೇಳೆ ಹಿಂದೂಪರ ಸಂಘಟನೆಯ ಮುಖಂಡರು ಸ್ಥಳದಲ್ಲಿ ಜಮಾಯಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.






error: Content is protected !!
Scroll to Top