‘ಅಸನಿ’ ಚಂಡಮಾರುತ ಎಫೆಕ್ಟ್ ➤ ಎರಡು ದಿನಗಳ ಕಾಲ ರಾಜ್ಯಾದ್ಯಂತ ಯೆಲ್ಲೋ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.12. ‘ಅಸಾನಿ’ ಚಂಡಮಾರುತವು ಆಂಧ್ರಪ್ರದೇಶದ ವಿಶಾಖಪಟ್ಟಣ ಮತ್ತು ಒಡಿಶಾದ ಕರಾವಳಿಗೆ ಧಾವಿಸಿದ್ದು, ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಸೇರಿದಂತೆ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಚಾಮರಾಜನಗರ, ದಾವಣಗೆರೆ, ಹಾವೇರಿ, ಚಿತ್ರದುರ್ಗ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದ್ದು, ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ ದಿನ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗಿದ್ದು, ಚಂಡಮಾರುತದ ಪರಿಣಾಮ ಎಲ್ಲೆಡೆ ಮೋಡ ಕವಿದ ವಾತಾವರಣವಿದೆ.

Also Read  ಕಡಬ ಭಾಗದಲ್ಲಿ ಕಾಣಿಸಿಕೊಂಡ ಶಂಕಿತ ನಕ್ಸಲರು - ಬಿಳಿನೆಲೆಯ ಮನೆಯೊಂದಕ್ಕೆ ಭೇಟಿ ನೀಡಿದ ಶಂಕೆ - ಪೊಲೀಸ್ ಅಧಿಕಾರಿಗಳ ಭೇಟಿ

 

 

error: Content is protected !!
Scroll to Top