RCBಗೆ ಸೋಲುಣಿಸಿದ ಪಂಜಾಬ್ ಕಿಂಗ್ಸ್ ➤ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಪ್ಲೇಆಫ್ ಹಾದಿ ಕಠಿಣ

(ನ್ಯೂಸ್ ಕಡಬ) newskadaba.com ಮುಂಬೈ, ಮೇ.14. ಪ್ಲೇಆಫ್ ಮಹತ್ವದ ಐಪಿಎಲ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಪಂಜಾಬ್‌ ಕಿಂಗ್ಸ್‌ ತಂಡವು 54 ರನ್‌ಗಳ ಅಂತರದಿಂದ ಮಣಿಸಿದೆ.

ಶುಕ್ರವಾರದಂದು ನಡೆದ ಪಂದ್ಯದಲ್ಲಿ ಬ್ಯಾಟಿಂಗ್‌ ಆಯ್ದುಕೊಂಡ ಪಂಜಾಬ್‌ ಕಿಂಗ್ಸ್‌ 20 ಓವರ್‌ಗಳಲ್ಲಿ 9 ವಿಕೆಟಿಗೆ 209 ರನ್‌ ಬಾರಿಸಿದೆ. ಇದನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 155 ರನ್‌ ಗಳಿಸಿತು. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡವು 54 ರನ್‌ಗಳ ಅಂತರದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಗೆಲುವಿನ ನಗೆ ಬೀರಿತು. ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಪ್ಲೇಆಫ್ ಹಾದಿ ಕಠಿಣಗೊಂಡಿದೆ.

Also Read  ಭಾರತಕ್ಕೆ ಗೆಲುವಿನ ಪುಳಕ ಹುಟ್ಟಿಸಿದ ವಿರಾಟ್ ಕೊಹ್ಲಿಯ ಭರ್ಜರಿ ಶತಕ

 

 

error: Content is protected !!
Scroll to Top