ರಾಷ್ಟ್ರ ರಾಜಧಾನಿಯಲ್ಲಿ ಅಗ್ನಿ ಅವಘಡ ➤ 26 ಮಂದಿ ಸಜೀವ ದಹನ

ಫೋಟೊ ಕೃಪೆ: NDTV

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.14. ರಾಷ್ಟ್ರ ರಾಜಧಾನಿ ದಿಲ್ಲಿಯ ಮುಂಡ್ಕಾ ಪ್ರದೇಶದ ಬಹುಮಹಡಿ ಕಟ್ಟಡವೊಂದರಲ್ಲಿ ಶುಕ್ರವಾರ ಸಂಜೆ ಕಾಣಿಸಿಕೊಂಡ ಭಾರೀ ಅಗ್ನಿ ಅವಘಡದಲ್ಲಿ 26 ಮಂದಿ ಸಜೀವ ದಹನಗೊಂಡಿದ್ದು, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಪಿಲ್ಲರ್ ಸಂಖ್ಯೆ 544 ರ ಸಮೀಪವಿರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದಲ್ಲಿ ಹಲವು ಜನರು ಸಿಲುಕಿಕೊಂಡಿದ್ದರು. ಘಟನೆಯಲ್ಲಿ ಕನಿಷ್ಟ 26 ಮಂದಿ ಮೃತಪಟ್ಟಿದ್ದು, 30 ಕ್ಕೂ ಅಧಿಕ ಮಂದಿಗೆ ಗಾಯಗೊಂಡಿರುವುದಾಗಿ ವರದಿಯಾಗಿದೆ. ಬೆಂಕಿಗಾಹುತಿಯಾದ ಒಂದು ಮಹಡಿಯಲ್ಲಿ ಶೋಧಕಾರ್ಯ ಮುಂದುವರೆದಿದ್ದು, ಇನ್ನೂ ಹಲವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ಆರಂಭಿಸಿದ್ದು, ಇದುವರೆಗೆ 40ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ.

Also Read  ಈ 8 ರಾಶಿಯವರಿಗೆ ಮದುವೆ ಯೋಗ, ವ್ಯಾಪಾರ ಅಭಿವೃದ್ಧಿ, ಅಂದುಕೊಂಡ ಕಾರ್ಯ ನಿವಾರಣೆಯಾಗುತ್ತದೆ ಕಷ್ಟಗಳು ಪರಿಹಾರವಾಗುತ್ತದೆ

 

error: Content is protected !!
Scroll to Top