ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ➤ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.14. ‘ಅಸಾನಿ’ ಚಂಡಮಾರುತದ ಅಬ್ಬರ ಕ್ಷೀಣಿಸಿದೆಯಾದರೂ ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇಂದಿನಿಂದ ಮೇ 17 ರ ವರೆಗೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದ್ದು, ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಅಸಾನಿ ಚಂಡಮಾರುತದ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುತ್ತಿದೆ.

Also Read  ಜ.16ಕ್ಕೆ ಪ್ರಿಯಾಂಕ ಗಾಂಧಿ ಕರ್ನಾಟಕ್ಕೆ ಆಗಮನ

 

error: Content is protected !!
Scroll to Top