ಇಂದಿನಿಂದ ರಾಜ್ಯದಲ್ಲಿ ಶಾಲೆಗಳು ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ,16. ಇಂದಿನಿಂದ ರಾಜ್ಯದಲ್ಲಿ ಶಾಲೆಗಳು ಆರಂಭಗೊಳ್ಳಲಿದ್ದು, ಕಳೆದ ಎರಡು ವರ್ಷಗಳಿಂದ ಕೊರೋನಾ ಸೋಂಕು ಹೆಚ್ಚಿದ ಪರಿಣಾಮ, ಶೈಕ್ಷಣಿಕ ಅವಧಿ ಕಡಿಮೆಯಾದ ಹಿನ್ನೆಲೆಯಲ್ಲಿ ಅದನ್ನು ಸರಿದೂಗಿಸಲು ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಆರಂಭಿಸಿದೆ.

ಕಲಿಕಾ ಚೇತರಿಕೆ ಯೋಜನೆಯಡಿಯಲ್ಲಿ 1ರಿಂದ 9ನೆ ತರಗತಿಯ ವಿದ್ಯಾರ್ಥಿಗಳು ತಾವು ಕಲಿತ ಹಿಂದಿನ ಎರಡು ವರ್ಷಗಳ ವಿಷಯಗಳನ್ನು ಅಭ್ಯಾಸ ಮಾಡಬೇಕಿದೆ. ಪ್ರತಿವರ್ಷ ಮೇ 29ರಂದು ಶಾಲೆಗಳು ಪ್ರಾರಂಭವಾಗುತ್ತಿದ್ದವು. ಆದರೆ ಈ ವರ್ಷ 14 ದಿನಗಳ ಮುಂಚಿತವಾಗಿಯೇ ಶಾಲೆ ಆರಂಭಗೊಳ್ಳುತ್ತಿದ್ದು, ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲಾಗಿದೆ. ಮಕ್ಕಳಿಗೆ ತರಬೇತಿ ನೀಡುವ ಶಿಕ್ಷಕರಿಗೆ ಪ್ರತ್ಯೇಕ ಕೈಪಿಡಿಯನ್ನು ತಯಾರಿಸಲಾಗಿದ್ದು, ಕೈಪಿಡಿ ಮತ್ತು ಕಲಿಕಾ ಹಾಳೆ ಆಧರಿಸಿ ಶಿಕ್ಷಕರು ಮಕ್ಕಳಿಗೆ ಪಾಠ ಮಾಡಲಿದ್ದಾರೆ.

Also Read  ಪುನೀತ್ ರಾಜ್ಕುಮಾರ್ ಅಗಲಿಕೆಗೆ ಒಂದು ವರ್ಷ;

error: Content is protected !!
Scroll to Top