ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆ ➤ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.19. ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡದ ಶಾಲೆಗಳಿಗೆ ಮೇ.19ರಂದು ರಜೆ ಘೋಷಣೆಯಾಗಿದೆ.

ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಗುರುವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.

 

 

error: Content is protected !!
Scroll to Top