ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಯುವಜೋಡಿ ಆತ್ಮಹತ್ಯೆ ➤ ಬೆಂಕಿಯ ಜ್ವಾಲೆಗೆ ಇಬ್ಬರೂ ಸಜೀವ ದಹನ



ಉಡುಪಿ, ಮೇ.22. ಬೆಂಗಳೂರು ಮೂಲದ ಯುವ ಜೋಡಿಯೊಂದು ಕಾರಿನೊಳಗೆ ಪೆಟ್ರೋಲ್ ಸುರಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಮಂದಾರ್ತಿ ಸಮೀಪದ ಹೆಗ್ಗುಂಜ್ಜೆಯಲ್ಲಿ ಸಂಭವಿಸಿದೆ.







ಆತ್ಮಹತ್ಯೆ ಮಾಡಿಕೊಂಡ ಯುವ ಜೋಡಿಯನ್ನು ಬೆಂಗಳೂರಿನ ಆರ್.ಟಿ. ನಗರ ನಿವಾಸಿಗಳಾದ ಯಶವಂತ್ ಮತ್ತು ಜ್ಯೋತಿ ಎಂದು ಗುರುತಿಸಲಾಗಿದೆ. ಭಾನುವಾರ ಮುಂಜಾನೆ 3 ಗಂಟೆ ಸುಮಾರಿಗೆ ಕಾರು ಬೆಂಕಿಗಾಹುತಿಯಾಗಿರುವುದು ಕಂಡುಬಂದಿದ್ದು, ಸ್ಥಳೀಯರು ಬೆಂಕಿ ನಂದಿಸಿದಾಗ ಕಾರಿನೊಳಗೆ ಯುವಕ, ಯುವತಿ ಸಜೀವ ದಹನವಾಗಿರುವುದು ಪತ್ತೆಯಾಗಿದೆ. ಕಳೆದ ಮೂರು ದಿನಗಳ ಹಿಂದೆ ಜೋಡಿ ಕಾಣೆಯಾಗಿರುವ ಬಗ್ಗೆ ಬೆಂಗಳೂರಿನ ಹೆಬ್ಬಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೃತರು ಶನಿವಾರದಂದು ಮಂಗಳೂರಿಗೆ ಬಂದು ಹುಸೇನ್ ಎಂಬವರಿಂದ ಸ್ವಿಫ್ಟ್ ಕಾರು ಬಾಡಿಗೆ ಪಡೆದು ಉಡುಪಿಗೆ ಬಂದಿದ್ದರು.






 

 

error: Content is protected !!
Scroll to Top