ಬೆಳ್ಳಂಬೆಳಗ್ಗೆ ಲಾರಿ-ಬಸ್ ನಡುವೆ ಭೀಕರ ಅಪಘಾತ ➤ ಎಂಟು ಮಂದಿ ಮೃತ್ಯು, 27 ಮಂದಿ ಗಂಭೀರ



(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಮೇ.24. ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಚಾಲಕರಿಬ್ಬರು ಸೇರಿದಂತೆ ಒಟ್ಟು ಎಂಟು ಮಂದಿ ಮೃತಪಟ್ಟ ಘಟನೆ ಹುಬ್ಬಳ್ಳಿ- ಧಾರವಾಡ ಬೈಪಾಸ್ ನ ರೇವಡಿಹಾಳ ಕ್ರಾಸ್ ಬಳಿ ಮಂಗಳವಾರ ಬೆಳಗಿನ ಜಾವ ನಡೆದಿದೆ.







ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಬೆಂಗಳೂರಿನಿಂದ ಪುಣೆ ಕಡೆ ಹೊರಟಿದ್ದ ಲಾರಿ ನಡುವೆ ರೇವಡಿಹಾಳ ಕ್ರಾಸ್ ಬಳಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಆಸ್ಪತ್ರೆಗೆ ಕರೆದೊಯ್ಯುವ ಹಾದಿ ಮಧ್ಯೆ ಮೃತಪಟ್ಟಿದ್ದಾರೆ. 27 ಮಂದಿ ಗಂಭೀರ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.






 

 

error: Content is protected !!
Scroll to Top