ಕಾಂಗ್ರೆಸ್ ಗೆ ‘ಕೈ ಕೊಟ್ಟ’ ಮುಖ್ಯಮಂತ್ರಿ ಚಂದ್ರು *➤ ಎರಡು ದಿನಗಳ ಹಿಂದಷ್ಟೇ ಕೆಪಿಸಿಸಿ ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದ ನಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.29. ಎರಡು ದಿನಗಳ ಹಿಂದಷ್ಟೇ ಕೆಪಿಸಿಸಿ ಘಟಕದ ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಮುಖ್ಯಮಂತ್ರಿ ಚಂದ್ರು ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ರೂ‌ ಗುರುತಿಸಿಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಪರೋಕ್ಷವಾಗಿ ಬೇಸರ ಹೊರಹಾಕಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ರಾಜೀನಾಮೆ ಪತ್ರವನ್ನು ನೀಡಿರುವ ಚಂದ್ರು, ಪ್ರಾಥಮಿಕ ಸದಸ್ಯತ್ವಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಜನಸೇವೆ ಮಾಡುವ ನಿಟ್ಟಿನಲ್ಲಿ ದೇಶದಲ್ಲೇ ಸುದೀರ್ಘ ಇತಿಹಾಸವಿರುವ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೆ. ಪಕ್ಷದಲ್ಲಿದ್ದು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಇಲ್ಲಿಯವರೆಗೆ ನನ್ನನ್ನು ಪಕ್ಷದಲ್ಲಿ ಬೆಂಬಲಿಸಿ, ಪ್ರೀತಿ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

Also Read  ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ದರ ಹೆಚ್ಚಳಕ್ಕೆ ಸರ್ಕಾರ ಅಸ್ತು

 

 

error: Content is protected !!
Scroll to Top