ಕಡಬ: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಕಾರು ಢಿಕ್ಕಿ..!

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕಿಯೋರ್ವಳಿಗೆ ಸ್ಕಾರ್ಫಿಯೋ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಕೊಯಿಲ ಗ್ರಾಮದ ಕೆಮ್ಮಾರ ಎಂಬಲ್ಲಿ ನಡೆದಿದೆ.

ಗಾಯಗೊಂಡ ವಿದ್ಯಾರ್ಥಿನಿಯನ್ನು ಕೆಮ್ಮಾರ ಬಡ್ಡಮೆ ನಿವಾಸಿ ಮುನಾಝ್ ಎಂಬವರ ಪುತ್ರಿ ಎರಡನೇ ತರಗತಿ ವಿದ್ಯಾರ್ಥಿ ರಿಝಾ ಫಾತಿಮಾ ಎಂದು ಗುರುತಿಸಲಾಗಿದೆ. ಈಕೆ ಮುಂಜಾನೆ ಮದ್ರಸಾಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಕಡಬ ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆನ್ನಲಾಗಿದೆ. ತಕ್ಷಣವೇ ಬಾಲಕಿಯನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Scroll to Top