ಉಪ್ಪಿನಂಗಡಿ: ಹಿಜಾಬ್ ವಿಚಾರದಲ್ಲಿ ವರದಿಗೆ ತೆರಳಿದ್ದ ಪತ್ರಕರ್ತನಿಗೆ ದಿಗ್ಬಂಧನ ಆರೋಪ ➤ ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಜು.02. ಹಿಜಾಬ್ ವಿಚಾರದಲ್ಲಿ ವರದಿಗೆಂದು ತೆರಳಿದ್ದ ಪತ್ರಕರ್ತರೋರ್ವರನ್ನು ಕೂಡಿ ಹಾಕಿ ವೀಡಿಯೋ ಡಿಲೀಟ್ ಮಾಡಿಸಿದ್ದ ಆರೋಪದಲ್ಲಿ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾಧಿಕಾರಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಪುತ್ತೂರು ಡಿವೈಎಸ್ಪಿ ಗಾನ ಪಿ. ಕುಮಾರ್ ಮೂಲಕ ದ.ಕ. ಜಿಲ್ಲಾ ಎಸ್ಪಿಯವರಿಗೆ ಹಾಗೂ ಕಡಬ ತಹಶಿಲ್ದಾರ್ ಅನಂತ ಶಂಕರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದ್ದು, ಈ ಸಂದರ್ಭದಲ್ಲಿ ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ., ಸ್ಥಾಪಕಾಧ್ಯಕ್ಷ ಕೆ.ಎಸ್. ಬಾಲಕೃಷ್ಣ ಕೊಯಿಲ, ಕಾರ್ಯದರ್ಶಿ ವಿಜಯ ಕುಮಾರ್ ಪೆರ್ಲ ಉಪಸ್ಥಿತರಿದ್ದರು.

Also Read  ಪುತ್ತೂರು,ಕಡಬ ತಾಲೂಕಿನಲ್ಲಿ ಇಂದು 12 ಮಂದಿಯಲ್ಲಿ ಕೊರೋನಾ ದೃಢ

 

error: Content is protected !!
Scroll to Top