(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 03. ಅನ್ನಭಾಗ್ಯ ಅಕ್ಕಿಯನ್ನು ಅಕ್ರಮ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳ ಪೈಕಿ ಓರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ ಘಟನೆ ಬೋಳಂತೂರು ಗ್ರಾಮದ ನಾರ್ಶ ಎಂಬಲ್ಲಿ ನಡೆದಿದೆ.
ಆರೋಪಿಗಳನ್ನು ಬೋಳಂತೂರು ಗ್ರಾಮದ ಕಲ್ಪನೆ ನಿವಾಸಿ ಅಬೂಬಕ್ಕರ್ ಬಿ, ನಾರ್ಶ ನಿವಾಸಿ ಹಮೀದ್ ನಾರ್ಶ ಎಂದು ಗುರುತಿಸಲಾಗಿದೆ. ವಿಟ್ಲ ಹೋಬಳಿಯ ಬೋಳಂತೂರು ಗ್ರಾಮದ ಎನ್ ಸಿ ರೋಡ್ ಎಂಬಲ್ಲಿ ನಾರ್ಶದಿಂದ ಬೋಳಂತೂರು ಕಡೆಗೆ ಲಾರಿಯಲ್ಲಿ ಅಕ್ಕಿ ಸಾಗಿಸುತ್ತಿದ್ದ ಮಾಹಿತಿ ಪಡೆದ ಪೊಲೀಸರು ವಾಹನವನ್ನು ತಡೆದು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
Also Read ಮಂಗಳೂರು: ಪೊಲೀಸ್ ಬಲೆಗೆ ಬಿದ್ದ ಮೂವರು ಡ್ರಗ್ ಪೆಡ್ಲರ್ ಗಳು ➤ ಪರೇಡ್ ಬೆನ್ನಲ್ಲೇ ಗಾಂಜಾ ಮಾರಾಟಕ್ಕೆ ಯತ್ನ