ಬೆಳ್ತಂಗಡಿ: ಗಾಂಜಾ ಸಾಗಾಟ ➤ ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 05. ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿ ಗಾಂಜಾ ಮತ್ತು ವಾಹನಗಳನ್ನು ವಶಪಡಿಸಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಎಂಬಲ್ಲಿ ನಡೆದಿದೆ.


ಬಂಧಿತ ಆರೋಪಿಗಳನ್ನು ತೌಸೀಫ್ ಹಾಗೂ ರಫೀಕ್ ಎಂದು ಗುರುತಿಸಲಾಗಿದೆ. ಮಾನ್ಯ ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೆಜ್ ಮಂಗಳೂರು ಇವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಗುರುವಾಯನಕೆರೆ ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಕುರಿತು ಖಚಿತ ಮಾಹಿತಿಯ ಮೇರೆಗೆ ಆರೋಪಿಗಳಿಬ್ಬರನ್ನು ಬಂಧಿಸಿ 41.530ಗ್ರಾಂ ಗಾಂಜಾ ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಇದೀಗ ಆರೋಪಿಗಳಿಗೆ ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Also Read  ಮನಪಾ ವ್ಯಾಪ್ತಿಯ ರಸ್ತೆ ಬದಿಯಲ್ಲಿನ ಅನಧಿಕೃತ ಅಂಗಡಿಗಳ ತೆರವಿಗೆ ಕ್ರಮ

 

error: Content is protected !!
Scroll to Top