“Think Green- Restore Ecosystem” ಅಭಿಯಾನಕ್ಕೆ ಕ್ಯಾಂಪಸ್ ಫ್ರಂಟ್ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 06. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಲ್ಲಿ, ಯುವ ಜನತೆಯಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯಾದ್ಯಂತ Think Green – Restore Ecosystem ಎಂಬ ಅಭಿಯಾನ ನಡೆಸಲು ಮುಂದಾಗಿದ್ದು, ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು.


ಅಭಿಯಾನದಲ್ಲಿ ವಿಚಾರ ಸಂಕಿರಣ, ಗಿಡ ನೆಡುವುದು, ರೈತರೊಂದಿಗೆ ಸೆಲ್ಫಿ, ಜಾಗೃತಿ ಕಾರ್ಯಕ್ರಮಗಳು, ಸಾರ್ವಜನಿಕ ಸಂಪರ್ಕ ಮುಂತಾದ ಕಾರ್ಯಕ್ರಮಗಳು ನಡೆಯಲಿದೆ. ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಥಾವುಲ್ಲ ಪುಂಜಾಲಕಟ್ಟೆ, ರಾಜ್ಯ ಉಪಾಧ್ಯಕ್ಷರಾದ ಅಡ್ವಕೇಟ್ ರೋಶನ್ ನವಾಝ್, ರಾಜ್ಯ ಪ್ರಧಾನ ಕಾರ್ಯದರ್ಶಿ ಅನೀಸ್ ಕುಂಬ್ರ, ರಾಜ್ಯ ಕಾರ್ಯದರ್ಶಿ ಸರ್ಫರಾಝ್ ಗಂಗಾವತಿ ಪೋಸ್ಟರ್ ಬಿಡುಗಡೆಗೊಳಿಸಿದರು.

Also Read  ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿಯಾಗಿ IPS ಅಧಿಕಾರಿ ಸಿಬಿ ರಿಷ್ಯಂತ್ ನೇಮಕ

error: Content is protected !!
Scroll to Top