ಇನೋವಾ ಕಾರು ಹಾಗೂ ಬೈಕ್ ನಡುವೆ ಅಪಘಾತ ➤ ಸವಾರ ಮೃತ್ಯು, ಸಹಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಮಡಿಕೇರಿ, ಜೂ. 06. ಇನೋವಾ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಮಡಿಕೇರಿ ಸಮೀಪದ ಸಿಂಕೋನ ಎಂಬಲ್ಲಿ ನಡೆದಿದೆ.


ಮೃತ ಯುವಕನನ್ನು ಕೇರಳದ ಕಣ್ಣೂರು ನಿವಾಸಿ ಶಾನಿಲ್ ಎಂದು ಗುರುತಿಸಲಾಗಿದೆ. ಸಹಸವಾರ ರಪ್ಸಾದ್ ಗಂಭೀರ ಗಾಯಗೊಂಡಿದ್ದಾರೆ. ಮಡಿಕೇರಿಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಇನೋವಾ ಕಾರು ಹಾಗೂ ಸುಂಟಿಕೊಪ್ಪ ಕಡೆಯಿಂದ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನಾ ಸ್ಥಳಕ್ಕೆ ಮಡಿಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top