ಕಡಬ ತಾಲೂಕು ವಸತಿ ಯೋಜನೆಯ ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 07. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ರಾಜೀವ್ ಗಾಂಧಿ ವಸತಿ ನಿಗಮ ಬೆಂಗಳೂರು ಹಾಗೂ ಕಡಬ ತಾಲೂಕು ಪಂಚಾಯತ್ ಇದರ ಸಹಯೋಗದಲ್ಲಿ ಕಡಬ ತಾಲೂಕಿನ 2021-22ನೇ ಸಾಲಿನ ಬಸವ ವಸತಿ ಹಾಗೂ ಡಾ/ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆಯ ಫಲಾನುಭವಿಗಳಿಗೆ ಕಾರ್ಯಾದೇಶ ನೀಡುವ ಸಮಾರಂಭವು ಕಡಬ ಸಂತ ಜೋಕಿಮ್ಸ್ ಚರ್ಚ್ ಸಮುದಾಯ ಭವನದಲ್ಲಿ ನಡೆಯಿತು.


ಸಮಾರಂಭದಲ್ಲಿ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅಧ್ಯಕ್ಷತೆ ವಹಿಸಿದ್ದು, ಫಲಾನುಭವಿಗಳಿಗೆ ಕಾಮಗಾರಿ ಆದೇಶವನ್ನು ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಸಮ್ಮುಖದಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ, ಕಡಬ ತಾಲೂಕು ಸಹಾಯಕ ನಿರ್ದೇಶಕರು ಚೆನ್ನಪ್ಪ ಗೌಡ, ದ.ಕ.ಜಿಲ್ಲಾ ವಸತಿ ನೋಡೆಲ್ ಅಧಿಕಾರಿ ಸವಿತಾ ಕೆ. ಉಪಸ್ಥಿತರಿದ್ದರು. 730 ಫಲಾನುಭವಿಗಳು ಕಾಮಗಾರಿ ಆದೇಶ ಪತ್ರವನ್ನು ಪಡೆದುಕೊಂಡಿದ್ದರು.

Also Read  ಮಂಗಳೂರು: ರಾಜ್ಯದಲ್ಲೇ ಮೊದಲ ಬಾರಿಗೆ ಜಾನುವಾರು ತುರ್ತು ಚಿಕಿತ್ಸಾ ಆಂಬ್ಯುಲೆನ್ಸ್ ಸೇವೆಗೆ ಚಾಲನೆ

error: Content is protected !!
Scroll to Top