ಉಪ್ಪಿನಂಗಡಿ: 8ನೇ ತರಗತಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ➤‌ ಶಾಲೆಗೆ ಹೋಗುತ್ತಿದ್ದ ವೇಳೆ ವೇಳೆ ಲಾಡ್ಜ್ ಗೆ ಕರೆದೊಯ್ದ ಕಾಮುಕ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ.08. ಯುವಕನೋರ್ವ 13 ವರ್ಷದ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಲಾಡ್ಜ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಲ್ಲೇರಿ ನಿವಾಸಿ ಮುನಾಸೀರ್ ಎಂದು ಗುರುತಿಸಲಾಗಿದೆ. ಮುನಾಸೀರ್ ಅಪ್ರಾಪ್ತ ಬಾಲಕಿಯ ಪರಿಚಯದವನಾಗಿದ್ದು, ಬಾಲಕಿಯ ಮನೆಗೆ ಆಗಾಗ್ಗೆ ಬಂದು ಹೋಗುತ್ತಿದ್ದು, ಪ್ರೀತಿಸುವಂತೆ ಬಾಲಕಿಯನ್ನು ಪೀಡಿಸುತ್ತಿದ್ದನೆನ್ನಲಾಗಿದೆ ಮೇ.30 ರಂದು ಬಾಲಕಿಯು ಮನೆಯಿಂದ ಶಾಲೆಗೆ ಹೊರಟು ಅರ್ಧ ದಾರಿ ತಲುಪಿದ ವೇಳೆ ಮುನಾಸಿರ್ ನಿನ್ನನ್ನು ಕಾರಿನಲ್ಲಿ ಶಾಲೆಗೆ ಬಿಡುತ್ತೇನೆ ಬಾ ಎಂದು ಕೈ ಹಿಡಿದು ಕರೆದುಕೊಂಡು ಹೋಗಿ ಶಾಲೆಗೆ ಬಿಡದೇ ಉಪ್ಪಿನಂಗಡಿಯ ಲಾಡ್ಜ್ ಗೆ ಕರೆದುಕೊಂಡು ಹೋಗಿ ಬಲವಂತವಾಗಿ ಅತ್ಯಾಚಾರ ನಡೆಸಿದ್ದಲ್ಲದೆ, ಜೂನ್ 7 ರಂದು ಕೂಡಾ ಬಾಲಕಿ ಶಾಲೆಗೆ ಹೋಗುತ್ತಿದ್ದ ವೇಳೆ ಬಲಾತ್ಕಾರವಾಗಿ ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಮತ್ತೆ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಸಾಯಿಸುವುದಾಗಿ ಕೊಲೆ ಬೆದರಿಕೆ ಒಡ್ಡಿದ್ದು, ಬಾಲಕಿ ನೀಡಿದ ದೂರಿ‌ನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಕೆವೈಸಿ ಅಪ್ ಡೇಟ್ ನೆಪದಲ್ಲಿ ಸಾವಿರಾರು ರೂ.ವಂಚನೆ- ದೂರು ದಾಖಲು

 

 

error: Content is protected !!
Scroll to Top