ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 10. ಆಕಸ್ಮಿಕವಾಗಿ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ.


ಮೃತ ಯುವಕನನ್ನು ಕಂಬಳಬೆಟ್ಟು ನಿವಾಸಿ ಯುವಕ ನಾಸಿರ್ ಎಂದು ಗುರುತಿಸಲಾಗಿದೆ. ಆಟೋ ಚಾಲಕ ವೃತ್ತಿ ಮಾಡುತ್ತಿದ್ದ ಈತ ಇತ್ತೀಚೆಗೆ ಮರದ ಕೆಲಸದಲ್ಲಿ ತೊಡಗಿದ್ದು, ಮರದ ಕೆಲಸ ಮಾಡುತ್ತಿದ್ದ ವೇಳೆ ಮರದಿಂದ ಆಕಸ್ಮಿಕವಾಗಿ ಬಿದ್ದು ಗಂಭೀರ ಗಾಯಗೊಂಡಿದ್ದನು. ತಕ್ಷಣವೇ ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

Also Read  ಮಹಿಳೆಗೆ ಲೈಂಗಿಕ ಕಿರುಕುಳ ➤ PSI ಅಮಾನತು

error: Content is protected !!
Scroll to Top