ಅರಂತೋಡು: ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 11. ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಘಟನೆ ಅರಂತೋಡು ಕೊಡಂಕೇರಿ ತಿರುವಿನಲ್ಲಿ ಇಂದು ಮುಂಜಾನೆ ಸಂಭವಿಸಿದೆ.


ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಮತ್ತು ಸಂಪಾಜೆಯಿಂದ ಸುಳ್ಯ ಕಡೆ ಬರುತ್ತಿದ್ದ ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಪರಿಣಾಮ ಎರಡೂ ಕಾರುಗಳ ಮುಂಭಾಗ ಜಖಂಗೊಂಡಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

error: Content is protected !!
Scroll to Top