ಪ್ರವಾದಿ ಮಹಮ್ಮದ್ (ಸ.ಅ)ರ ಬಗ್ಗೆ ಅವಹೇಳನಕಾರಿ ಹೇಳಿಕೆ ➤ ನೂಪುಲ್ ಶರ್ಮಾ ಮತ್ತು ನವೀನ್ ಜಿಂದಾಲ್ ಬಂಧನಕ್ಕೆ ಒತ್ತಾಯಿಸಿ SDPI ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವತಿಯಿಂದ ಮಡಂತ್ಯಾರ್ ನಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 11. ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ)ರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ರಾಷ್ಟ್ರೀಯ ವಕ್ತಾರರಾದ ನೂಪುಲ್ ಶರ್ಮಾ ಮತ್ತು ನವೀನ್ ಜಿಂದಾಲ್ ಶೀಘ್ರ ಬಂಧನ ಮಾಡಬೇಕು ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತ ತಲೆ ತಗ್ಗಿಸುವಂತೆ ಮಾಡಿದ ಬಿಜೆಪಿ ಸರ್ಕಾರ ಕ್ಷಮೆಯಾಚಿಸಬೇಕು ಎಂದು SDPI ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವತಿಯಿಂದ ಮಡಂತ್ಯಾರ್ ನ ಬಸ್ ನಿಲ್ದಾಣ ಬಳಿ ನಡೆದ ಪ್ರತಿಭಟನೆಯಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಸಮಿತಿ ಸದಸ್ಯರಾದ ರಿಯಾಜ್ ಕಡಂಬು ಒತ್ತಾಯಿಸಿದ್ದಾರೆ.

Also Read  ರಾಜ್ಯಮಟ್ಟದ ರಿಲೇ ಸ್ಪರ್ಧೆ ➤ ಸೈಂಟ್ ಆನ್ಸ್ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

 

ಪ್ರತಿಭಟನೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಅಧ್ಯಕ್ಷರಾದ ನಿಸಾರ್ ಕುದ್ರಡ್ಕ, ಕಾರ್ಯದರ್ಶಿ ನಿಜಾಮ್ ಗೇರುಕಟ್ಟೆ, ಉಪಾಧ್ಯಕ್ಷರಾದ ಹನೀಫ್ ಪುಂಜಾಲಕಟ್ಟೆ ವಿಧಾನಸಭಾ ಸಮಿತಿ ಸದಸ್ಯರಾದ ಹೈದರ್ ನಿರ್ಸಲ್, ಸಾಲಿ ಮದ್ದಡ್ಕ, ಪಕ್ಷದ ಬ್ಲಾಕ್ ಸಮಿತಿ ನಾಯಕರು ಹಾಗೂ ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.

error: Content is protected !!
Scroll to Top