ವಿಟ್ಲ: ಮನೆಯಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹೊತ್ತೊಯ್ದ ಕಳ್ಳರು

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 11. ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಘಟನೆ ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ನಡೆದಿದೆ.

ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿ ನಿವಾಸಿ ನಾಗೇಶ್‌ ಶೆಟ್ಟಿ ಅವರ ಪತ್ನಿ ಪ್ರೀತಿ ಶೆಟ್ಟಿ ಎಂಬವರು ಜೂನ್ 8 ರಂದು ಪುತ್ತೂರಿನ ಬಂಟರ ಭವನದಲ್ಲಿ ನಡೆದ ಮದುವೆಗೆ ತೆರಳಿ ಮೂರು ಗಂಟೆಯ ಸುಮಾರಿಗೆ ಚಿನ್ನಾಭರಣವನ್ನು ಮನೆಯಲ್ಲಿಟ್ಟಿದ್ದಾರೆ. ನಂತರ ಮರುದಿನ ಮತ್ತೊಂದು ಮದುವೆಗೆ ತೆರಳಲು ಸಿದ್ಧತೆ ನಡೆಸುತ್ತಿದ್ದ ವೇಳೆ ಚಿನ್ನಾಭರಣ ಹುಡುಕಾಡಿದ್ದು, ಈ ವೇಳೆ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಕೇಂದ್ರ ಸರ್ಕಾರದ ಪಿಎಂಇಜಿಪಿ, ಮುದ್ರಾ ಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ - ಲೀಡ್ ಬ್ಯಾಂಕ್ ಸಭೆಯಲ್ಲಿ ಅಧಿಕಾರಿಗಳಿಗೆ ಸಂಸದ ಚೌಟ ಸೂಚನೆ

 

 

error: Content is protected !!
Scroll to Top