ವಿಟ್ಲ: ಮನೆಯಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹೊತ್ತೊಯ್ದ ಕಳ್ಳರು



(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 11. ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಘಟನೆ ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ನಡೆದಿದೆ.







ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿ ನಿವಾಸಿ ನಾಗೇಶ್‌ ಶೆಟ್ಟಿ ಅವರ ಪತ್ನಿ ಪ್ರೀತಿ ಶೆಟ್ಟಿ ಎಂಬವರು ಜೂನ್ 8 ರಂದು ಪುತ್ತೂರಿನ ಬಂಟರ ಭವನದಲ್ಲಿ ನಡೆದ ಮದುವೆಗೆ ತೆರಳಿ ಮೂರು ಗಂಟೆಯ ಸುಮಾರಿಗೆ ಚಿನ್ನಾಭರಣವನ್ನು ಮನೆಯಲ್ಲಿಟ್ಟಿದ್ದಾರೆ. ನಂತರ ಮರುದಿನ ಮತ್ತೊಂದು ಮದುವೆಗೆ ತೆರಳಲು ಸಿದ್ಧತೆ ನಡೆಸುತ್ತಿದ್ದ ವೇಳೆ ಚಿನ್ನಾಭರಣ ಹುಡುಕಾಡಿದ್ದು, ಈ ವೇಳೆ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 

 

error: Content is protected !!
Scroll to Top