ಪೆರಿಯಶಾಂತಿ: ಚಲಿಸುತ್ತಿದ್ದ ಟ್ರಾವೆಲ್ಲರ್ ಮೇಲೆ ಉರುಳಿ ಬಿದ್ದ ಮರ ➤‌ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಜೂ.12. ಟೆಂಪೋ ಟ್ರಾವೆಲ್ಲರ್ ಮೇಲೆ ಮರ ಬಿದ್ದ ಪರಿಣಾಮ ವಾಹನ ಜಖಂಗೊಂಡು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಪೆರಯಶಾಂತಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ.

ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ಮೇಲೆ ಪೆರಯಶಾಂತಿ ಸಮೀಪ ರಸ್ತೆಯ ಪಕ್ಕದಲ್ಲಿದ್ದ ಮರವೊಂದು ಉರುಳಿ ಬಿದ್ದಿದೆ. ಘಟನೆಯಲ್ಲಿ ಟ್ರಾವೆಲ್ಲರ್ ಮೇಲ್ಭಾಗಕ್ಕೆ ಹಾನಿಯಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

 

Scroll to Top