ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ➤ ದೂರು ಹಿಂತೆಗೆಯುವಂತೆ ವಿದೇಶದಿಂದ ಬೆದರಿಕೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜೂ. 14. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಯುವಕ ದೂರು ಹಿಂತೆಗೆಯುವಂತೆ ಧಮ್ಕಿ ಹಾಕುತ್ತಿರುವ ಘಟನೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಇಲ್ಲಿನ ಗ್ರಾಮವೊಂದರ ಅಪ್ರಾಪ್ತ ಬಾಲಕಿಯ ಮೇಲೆ ಅದೇ ಗ್ರಾಮದ ಯುವಕನೋರ್ವ ಅತ್ಯಾಚಾರ ನಡೆಸಿದ್ದಲ್ಲದೇ, ಈ ವಿಚಾರವನ್ನು ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಕೆ ಹಾಕಿದ್ದಾನೆ. ಆದರೆ ಅಪ್ರಾಪ್ತೆಯು ನಡೆದ ವಿಷಯವನ್ನೆಲ್ಲಾ ತನ್ನ ಅಜ್ಜಿಯ ಬಳಿ ಹೇಳಿಕೊಂಡಿದ್ದು, ಈ ಕುರಿತು ಆಕೆಯ ಪೋಷಕರು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇತ್ತ ದೂರು ದಾಖಲಾಗುತ್ತಿದ್ದಂತೆಯೇ ಆರೋಪಿಯು ತನ್ನ ತಂದೆಯ ಜೊತೆ ಆಫ್ರಿಕಾದ ಕ್ಯಾಮರೂನ್​ಗೆ ತೆರಳಿದ್ದು, ಈಗ ಅಲ್ಲಿಂದಲೇ ಬಾಲಕಿಗೆ ವಾಟ್ಸ್ ಆಪ್ ಕರೆ ಮೂಲಕ ದೂರು ಹಿಂತೆಗೆಯುವಂತೆ ಧಮ್ಕಿ ಹಾಕುತ್ತಿರುವುದಾಗಿ ತಿಳಿದುಬಂದಿದೆ.

Also Read  ಗಮನ ಬೇರೆಡೆ ಸೆಳೆದು ಬ್ಯಾಗ್ ಕಳವುಗೈದ ಖದೀಮರು

 

error: Content is protected !!
Scroll to Top