ಪುತ್ತೂರು: ಸಾಂಬಾರು ಪಾತ್ರೆಗೆ ಕಾಲುಜಾರಿ ಬಿದ್ದು ಮಹಿಳೆ ಮೃತ್ಯು..!



(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 14. ಶಾಲೆಯ ಬಿಸಿಯೂಟ ಮಾಡುತ್ತಿದ್ದ ಸಂದರ್ಭ ಸಾಂಬಾರ್‌ ಪಾತ್ರೆಗೆ ಕಾಲು ಜಾರಿ ಬಿದ್ದ ಮಹಿಳೆಯೋರ್ವರು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೈಂಟ್ ವಿಕ್ಟರ್ ಶಾಲೆಯಲ್ಲಿ ನಡೆದಿದೆ.







ಮೃತ ಮಹಿಳೆಯನ್ನು ಅಗ್ನೆಸ್ ಪ್ರಮೀಳಾ ಡಿಸೋಜಾ (37) ಎಂದು ಗುರುತಿಸಲಾಗಿದೆ. ಪ್ರಮೀಳಾ ಡಿಸೋಜಾ ಅವರು ಪುತ್ತೂರು ಕಸ್ಬಾ ಗ್ರಾಮದ ಸೈಂಟ್ ವಿಕ್ಟರ್ ಶಾಲೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದು, ಮೇ.30 ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಶಾಲೆಯ ಅಡುಗೆ ಮನೆಯ ಬಾಗಿಲ ಬಳಿ ತಯಾರು ಮಾಡಿಟ್ಟಿದ್ದ ಸಾಂಬಾರ್ ಪಾತ್ರೆಗೆ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top