?? Breaking News ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ➤ ಸವಾರರು ದುರ್ಮರಣ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 14. ಲಾರಿ‌ ಢಿಕ್ಕಿ ಹೊಡೆದು ದ್ವಿಚಕ್ರ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಿದ್ದಕಟ್ಟೆ ಸಮೀಪದ ಸೋರ್ನಾಡು ಎಂಬಲ್ಲಿ ಮಂಗಳವಾರದಂದು ಸಂಜೆ ನಡೆದಿದೆ.

ಮೃತ ದ್ವಿಚಕ್ರ ವಾಹನ ಸವಾರರನ್ನು ಲೊರೆಟ್ಟೋ ಕಮಲ್ ಕಟ್ಟೆ ನಿವಾಸಿ ನಿತಿನ್ ಹಾಗೂ ಶಶಿರಾಜ್‌ ಎಂದು ಗುರುತಿಸಲಾಗಿದೆ. ಇವರು ಸಿದ್ದಕಟ್ಟೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಟಿಪ್ಪರ್ ಲಾರಿಯು ನೇರವಾಗಿ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಬೈಕ್ ನಲ್ಲಿದ್ದ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ ಮೂರ್ತಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚಾರ ಬಂದ್

 

error: Content is protected !!
Scroll to Top